ಬಸವೇಶ್ವರ
ಬ಼
ಶ್ರೀ ಬಸವೇಶ್ವರ (ಶ್ರೀ ಬಸವ ಅಥವಾ ಬಸವಣ್ಣರವರು)
ಜಗದ್ಗುರು ಬಸವೇಶ್ವರ
ಗುರು ಬಸವಣ್ಣ
ಜನನ
ಕ್ರಿ.ಶ. ೧೧೩೨
ಬಸವನ ಬಾಗೇವಾಡಿ ವಿಜಯಪುರ ಜಿಲ್ಲೆ, ಕರ್ನಾಟಕ, ಭಾರತ
ಮರಣ
ಕ್ರಿ.ಶ. ೧೧೬೮
ಕೂಡಲಸಂಗಮ, ಕರ್ನಾಟಕ, ಭಾರತ
ತತ್ವಶಾಸ್ತ್ರ
ಶರಣ ಶರಣೆಯರ ಲಿಂಗಾಯತ ದರ್ಶನ",
ಸಾಹಿತ್ಯದ ಕೆಲಸಗಳು
ವಚನ ಸಾಹಿತ್ಯ ವಚನಗಳು
ನುಡಿ
ಅರಿತಡೆ ಶರಣ-ಮರೆತಡೆ ಮಾನವ , ಕಾಯಕ ದಾಸೋಹ , ಜಂಗಮ
ಅಧ್ಯಾತ್ಮಜ್ಞಾನೀ ಅರ್ಥಶಾಸ್ತ್ರಜ್ಞ
ಲಿಂಗಾಯತ ಧರ್ಮದ ಸಂಸ್ಥಾಪಕ ಗುರುಗಳು. ಕಲ್ಯಾಣದ (ಈಗಿನ ಬಸವಕಲ್ಯಾಣ, ಬೀದರ್ ಜಿಲ್ಲೆ) ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು. ೧೨ನೇ ಶತಮಾನದ ಶರಣ ಸಂಕುಲದ ಸಂಚಾಲಕರಾಗಿ, ಎಲ್ಲ ಜಾತಿಗಳ ಜನ ಸಮಾನವಾಗಿ ಕುಳಿತು ಚರ್ಚಿಸುವ ಅನುಭವ ಮಂಟಪದ ಪ್ರವರ್ತಕರಾಗಿದ್ದರು.
ಬಸವಣ್ಣನವರ ಜೊತೆ ೭೭೦ ಅಮರಗಣಂಗಳು ಇದ್ದರೆಂದು ಮತ್ತು ೧,೯೬,೦೦೦ ಶರಣರಿದ್ದರೆಂದು ಐತಿಹಾಸಿಕ ಪುರಾವೆಗಳಿವೆ.
ಅಲ್ಲಮಪ್ರಭು, ಚನ್ನಬಸವಣ್ಣ, ಅಕ್ಕಮಹಾದೇವಿ, ಸಮಗಾರ ಹರಳಯ್ಯ, ಮಧುವರಸ, ಆಯ್ದಕ್ಕಿ ಲಕ್ಕಮ್ಮ, ಆಯ್ದಕ್ಕಿ ಮಾರಯ್ಯ, ಸಿದ್ಧರಾಮೇಶ್ವರ, ಅಕ್ಕನಾಗಮ್ಮ, ನೀಲಾಂಬಿಕೆ, ಗಂಗಾಂಬಿಕೆ, ಡೋಹರ ಕಕ್ಕಯ್ಯ, ಅಂಬಿಗರ ಚೌಡಯ್ಯ, ಮಡಿವಾಳ ಮಾಚಿದೇವ, ನುಲಿಯ ಚಂದಯ್ಯ, ಕಿನ್ನರಿ ಬ್ರಹ್ಮಯ್ಯ, ಬಹುರೂಪಿ ಚೌಡಯ್ಯ, ಒಕ್ಕಲಿಗ ಮುದ್ದಣ್ಣ, ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಸಂಬೋಳಿ ನಾಗಿದೇವ, ಸೂಳೆ ಸಂಕವ್ವೆ, ಕುಂಬಾರ ಗುಂಡಯ್ಯ, ಕೇತಲದೇವಿ, ಉರಿಲಿಂಗಪೆದ್ದಿ, ಉರಿಲಿಂಗಪೆದ್ದಿಗಳ ಪುಣ್ಯಸ್ತ್ರೀ ಕಾಳವ್ವೆ, ಗಜೇಶ ಮಸಣಯ್ಯ, ತುರುಗಾಹಿ ರಾಮಣ್ಣ, ಸತ್ಯಕ್ಕ, ಲದ್ದೆಯ ಸೋಮಣ್ಣ, ಅಕ್ಕಮ್ಮ, ಹಡಪದ ಅಪ್ಪಣ್ಣ, ಲಿಂಗಮ್ಮ, ಮೋಳಿಗೆ ಮಾರಯ್ಯ, ವೀರಗೊಲ್ಲಾಳ, ಹಾವಿನಾಳ ಕಲ್ಲಯ್ಯ, ಕೋಲ ಶಾಂತಯ್ಯ, ಶಾಂತರಸ, ಸೊಡ್ಡಳ ಬಾಚರಸ, ಅಮುಗೆ ರಾಯಮ್ಮ, ಅಮುಗಿ ದೇವಯ್ಯ, ಕೂಗಿನ ಮಾರಯ್ಯ, ಕೀಲಾರದ ಭೀಮಣ್ಣ, ಎಚ್ಚರಿಕೆ ಕಾಯಕದ ಮುಕ್ತಿನಾಥಯ್ಯ, ವೈದ್ಯ ಸಂಗಣ್ಣ, ಗಾಣದ ಕಣ್ಣಪ್ಪ, ಜೇಡರ ದಾಸಿಮಯ್ಯ, ದುಗ್ಗಳೆ ಇವರೆಲ್ಲರೂ ಲಿಂಗಾಯತ ಧರ್ಮದ ಪ್ರವರ್ತಕರು.
ಬಸವಣ್ಣನವರು ಪ್ರಧಾನಿಯಾಗಿ ರಾಜಕೀಯ ಶಕ್ತಿಯಾಗಿ, ಧರ್ಮಗುರುವಾಗಿ ಆಧ್ಯಾತ್ಮಿಕ ಶಕ್ತಿಯಾಗಿ ಬೆಳೆದು ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆದರು. ಜಾತಿ ವ್ಯವಸ್ಥೆಯನ್ನು ಕಿತ್ತೊಗೆಯಲು ಬಹುವಾಗಿ ಶ್ರಮಿಸಿದರು
.[೧][೨]
ಜನನ/ಜೀವನ
ಬಸವಣ್ಣನವರು ೧೧೩2 ರಲ್ಲಿ ಈಗಿನ ಬಿಜಾಪುರ ಜಿಲ್ಲೆಯಲ್ಲಿರುವ ಬಸವನ ಬಾಗೇವಾಡಿ ಗ್ರಾಮದಲ್ಲಿ (ಬಸವಣ್ಣನವರ ತಾಯಿಯ ತವರು ಮನೆಯಾದ ಇಂಗಳೇಶ್ವರ ಗ್ರಾಮದಲ್ಲಿ ಜನಿಸಿದರು ಎಂಬ ಪ್ರತೀತಿ ಇದೆ.), ಶ್ರೀ ಮಾದರಸ ಮತ್ತು ಮಾದಲಾಂಬಿಕೆ ದಂಪತಿಗಳಿಗೆ ಜನಿಸಿದರು. ಬಸವಣ್ಣ ಚಿಕ್ಕಂದಿನಿಂದಲೂ ವೈದಿಕ ಸಂಸ್ಕೃತಿಯ ಕರ್ಮಾಚರಣೆಗಳ ವಿರೋಧಿಯಾಗಿದ್ದರು. ಅಕ್ಕ ನಾಗಮ್ಮ ಮತ್ತು ಭಾವ ಶಿವಸ್ವಾಮಿಯ ಜೊತೆಯಲ್ಲಿ ಬಾಲ್ಯವನ್ನು ಕಳೆದರು. ಅವರ ೮ನೇ ವಯಸ್ಸಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಬಸವಣ್ಣನವರಿಗೆ ಜನಿವಾರ ಹಾಕಲು ಬಂದಾಗ, ಬಸವಣ್ಣನವರು ತನಗಿಂತ ಹಿರಿಯಳಾದ ಅಕ್ಕ ನಾಗಮ್ಮನಿಗೆ ಕೊಡಲು ಕೇಳುತ್ತಾರೆ, ಆಗ ಇದು ಪುರುಷರಿಗೆ ಮಾತ್ರ ಕೊಡುವಂತಹುದು ಆದ್ದರಿಂದ ಅಕ್ಕನಿಗೆ ಕೊಡಲು ಬರುವುದಿಲ್ಲ ಅಂತ ನುಡಿದಾಗ, ಬಸವಣ್ಣ ಪುರುಷ/ಮಹಿಳೆ ಅಸಮಾನತೆಯನ್ನು ವಿರೋಧಿಸಿ ಮನೆಯಿಂದ ನಿರ್ಗಮಿಸಿ ಕೂಡಲಸಂಗಮಕ್ಕೆ ಹೊರಡುತ್ತಾರೆ.[೩][೪]
ಧಾರ್ಮಿಕ ಬೆಳವಣಿಗೆಗಳು
[ಸೂಕ್ತ ಉಲ್ಲೇಖನ ಬೇಕು]
ಬಸವೇಶ್ವರರು ಹನ್ನೆರಡು ವರ್ಷಗಳ ಕಾಲ ಕೂಡಲ ಸಂಗಮದಲ್ಲಿ ಅಧ್ಯಯನ ಮಾಡುತ್ತಾ ಕಳೆದರು. ಅವರ ದೃಷ್ಟಿಯಲ್ಲಿ ದೇವನು ಒಬ್ಬ ಮತ್ತು ಅವನು ಮಾನವನಲ್ಲಿದ್ದಾನೆಯೇ ಹೊರತು ಗುಡಿ-ಗುಂಡಾರಗಳಲ್ಲಿ ಅಲ್ಲ. ಕೆಲಸ ಮಾಡಿ ಜೀವನ ನಡೆಸಬೇಕು, ಆಲಸಿ ಜೀವನ ಸಲ್ಲ. ಸುಳ್ಳು ಹೇಳುವುದು, ವಂಚಿಸುವುದು, ಕೊಲೆ-ಸುಲಿಗೆ ಮಾಡುವುದು, ಪ್ರಾಣಿಬಲಿ ನೀಡುವುದು, ಪರಧನ ಹರಣ, ಪರಸ್ತ್ರೀ ವ್ಯಾಮೋಹ ಹೊಂದುವುದು ಘೋರ ಅಪರಾಧ.
ಕೆಲಸದಲ್ಲಿ ಮೇಲು ಅಥವಾ ಕೀಳು ಎಂಬುದಿಲ್ಲ. ಪುರುಷನಂತೆ ಮಹಿಳೆಗೂ ವಿದ್ಯಾಭ್ಯಾಸದ ಮತ್ತು ತನ್ನ ಜೀವನವನ್ನು ರೂಪಿಸಿಕೊಳ್ಳುವ ಹಕ್ಕಿದೆ. ಹೀಗೆ ಸಮಾನತೆ, ಕಾಯಕ, ದಾಸೋಹ ತತ್ವಗಳನ್ನು ಸ್ವೀಕರಿಸುವ ಮತ್ತು ಆಚರಿಸುವ ಯಾರು ಬೇಕಾದರೂ ಶಿವಶರಣರಾಗ ಬಹುದು ಎಂದು ಬಸವಣ್ಣವರು ಸಾರಿದರು. ಪೊಳ್ಳು ದೇವರುಗಳನ್ನು ಸ್ತುತಿಸುತ್ತಿದ್ದ ಮತ್ತು ಪುರೋಹಿತಶಾಹಿಯಿಂದ ನಿರಂತರವಾಗಿ ವಂಚನೆಗೊಳಗಾಗುತ್ತಿದ್ದ ಜನತೆಗೆ ಬಸವಣ್ಣನವರು ಹೊಸ ಜೀವನ ನೀಡಿದರು.
ಜಾತಿ, ಮತ, ಲಿಂಗಗಳ ಭೇದವನ್ನು ತಿರಸ್ಕರಿಸಿದ ಬಸವಣ್ಣನವರು ಸಾಮಾಜಿಕ ಕ್ರಾಂತಿಗೆ ಕಾರಣವಾದರು. ಬಸವಣ್ಣನವರನ್ನು ಜಗಜ್ಯೋತಿ ಬಸವೇಶ್ವರ, ಕ್ರಾಂತಿಯೋಗಿ ಬಸವಣ್ಣ, ಭಕ್ತಿ ಭಂಡಾರಿ ಬಸವಣ್ಣ, ಮಹಾ ಮಾನವತಾ ವಾದಿ ಎಂದೂ ಕರೆಯಲಾಗುತ್ತದೆ. ಮಾನವಿಯತೆ. ಕಾಯಕ ನಿಷ್ಠೆ ಧರ್ಮದ ಬುನಾದಿಯಾಗಬೇಕು ಎಂದು ಬಲವಾಗಿ ನಂಬಿದ್ದರು.
ಬಸವಣ್ಣ ತಮ್ಮ ವಚನಗಳ ಮೂಲಕ ಕಾಯಕವೇ ಕೈಲಾಸ, ದಯವೇ ಧರ್ಮದ ಮೂಲವಯ್ಯ, ಅಯ್ಯ ಎಂದರೆ ಸ್ವರ್ಗ ಎಲವೂ ಎಂದರೆ ನರಕ ಎಂದು ಸಾರುವ ಮೂಲಕ ತಮ್ಮ ಮಾನವಾತಾ ವಾದಕ್ಕೆ ಸಾಹಿತ್ಯದ ಸ್ಪರ್ಶ ನೀಡಿದರು. ಕನ್ನಡ ಸಾಹಿತ್ಯಕ್ಕೆ ವಚನಗಳ ಮೂಲಕ ಅಪೂರ್ವ ಕೊಡುಗೆ ಅಪಾರ ಇದುವರೆಗೆ ಸುಮಾರು 1500 ವಚನಗಳನ್ನು ಸಂಗ್ರಹಿಸಿಡಲಾಗಿದೆ.
ಬಸವಣ್ಣನವರ ಪ್ರೇರಣೆಯಿಂದ ಹರಿಜನ ಮತ್ತು ಬ್ರಾಹ್ಮಣ ಕುಟುಂಬಗಳ ನಡುವೆ ನಡೆದ ಅನುಲೋಮ ವಿವಾಹ ಕಲ್ಯಾಣದ ಕ್ರಾಂತಿಗೆ ಮುನ್ನುಡಿಯಾಯಿತು. ಇವರು ಷಟ್ ಸ್ಥಲ ವಚನ, ಕಾಲಜ್ಞಾನ ವಚನ, ಮಂತ್ರಗೋಪ್ಯ, ಶಿಖಾರತ್ನ ವಚನ ಎಂಬ ಗ್ರಂಥಗಳನ್ನು ಬರೆದಿದ್ದಾರೆ. ಇವರನ್ನು ಕುರಿತಂತೆ ಕನ್ನಡ, ತೆಲುಗು, ಸಂಸ್ಕೃತ, ತಮಿಳು, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ಪುರಾಣಗಳು ರಚನೆಯಾಗಿವೆ. ಬಾಗೇವಾಡಿ ಕಪ್ಪಡಿಸಂಗಮ, ಕಲ್ಯಾಣ ಪಟ್ಟಣಗಳಲ್ಲಿ ಇವರ ಸ್ಮಾರಕಗಳಿವೆ.
ಬೆಳಗಾವಿ ಜಿಲ್ಲೆಯ ಅರ್ಜುನವಾಡದ ಶಿಲಾಶಾಸನದಲ್ಲಿ ಉಲ್ಲೇಖಿತವಾಗಿರುವ ಸಂಗಣಬಸವ ಎಂಬ ಹೆಸರು ವಚನಕಾರ ಬಸವಣ್ಣನವರದ್ದೇ ಎಂದು ವಿದ್ವಾಂಸರು ಊಹಿಸಿದ್ದಾರೆ. "ನಮನ" ( ಪ್ರೊ.ಚಿದಾನಂದ ಮೂರ್ತಿಯವರಂಥ ಹಿರಿಯರೂ ಕೆಲವು ಗೌರವಾನ್ವಿತ ಸಂಪ್ರದಾಯ ಪರಾಯಣ ಮಠಾಧಿಪತಿಗಳೂ ವೀರ
ಬಸವಣ್ಣನ ವಚನಗಳು - 81 ರಿಂದ 90 ರವರೆಗೆ
೮೧.
ಏತ ತಲೆವಾಗಿದರೇನು ? ಗುರುಭಕ್ತನಾಗಬಲ್ಲುದೆ ?
ಇಕ್ಕುಳ ಕೈ ಮುಗಿದರೇನು ? ಭೃತ್ಯಾಚಾರಿಯಾಗಬಲ್ಲುದೆ ?
ಗಿಳಿಯೋದಿದರೇನು ? ಲಿಂಗವೇದಿಯಾಗಬಲ್ಲುದೆ ?
ಕೂಡಲಸಂಗನ ಶರಣರು ಬಂದ ಬರವ, ನಿಂದ ನಿಲವ
ಅನಂಗಸಂಗಿಗಳೆತ್ತ ಬಲ್ಲರು ?
೮೨.
ಒಲವಿಲ್ಲದ ಪೂಜೆ, ನೇಹವಿಲ್ಲದ ಮಾಟ;
ಆ ಪೂಜೆಯು, ಆ ಮಾಟವು
ಚಿತ್ರದ ರೂಹು ಕಾಣಿರಣ್ಣ!
ಚಿತ್ರದ ಕಬ್ಬು ಕಾಣಿರಣ್ಣ!
ಅಪ್ಪಿದರೆ ಸುಖವಿಲ್ಲ, ಮೆಲಿದರೆ ಸವಿಯಿಲ್ಲ;
ಕೂಡಲಸಂಗಮದೇವ, ನಿಜವಿಲ್ಲದವನ ಭಕ್ತಿಯಿಂತುಟು!
೮೩.
ಹಬ್ಬಕ್ಕೆ ತಂದ ಹರಕೆಯ ಕುರಿ
ತೋರಣಕ್ಕೆ ತಂದ ತಳಿರ ಮೇಯಿತ್ತು!
ಕೊಂದಹರೆಂಬುದನರಿಯದೆ ಬೆಂದೊಡಲ ಹೊರೆಯ
ಹೋಯಿತ್ತು!
ಅದಂದೆ ಹುಟ್ಟಿತು, ಅದಂದೆ ಹೊಂದಿತ್ತು.
ಕೊಂದವರುಳಿದರೆ ಕೂಡಲಸಂಗಮದೇವ ?
೮೪.
ಹಾವಿನ ಬಾಯಿ ಕಪ್ಪೆ ಹಸಿದು
ತಾ ಹಾರುವ ನೊಣಕಾಸೆ ಮಾಡುವಂತೆ,
ಶೂಲವನೇರುವ ಕಳ್ಳ ಹಾಲು ತುಪ್ಪವ ಕುಡಿದು
ಮೇಲಿನ್ನೇಸು ಕಾಲ ಬದುಕುವನೋ ?!
ಕೆಡುವೊಡಲ ನೆಚ್ಚಿ, ಕಡುಹುಸಿಯನೆ ಹುಸಿದು
ಒಡಲ ಹೊರೆವವರ ಮೆಚ್ಚ ನಮ್ಮ ಕೂಡಲಸಂಗಮದೇವ.
೮೫.
ಅರತವಡಗದು. ಕ್ರೋಧ ತೊಲಗದು;
ಕ್ರೂರಕುಭಾಷೆ ಕುಹುಕ ಬಿಡದನ್ನಕ
ನೀನೆತ್ತಲು ? ಶಿವನೆತ್ತಲು ? ಹೋಗತ್ತ ಮರುಳೆ!
ಭವರೋಗವೆಂಬ ತಿಮಿರ ತಿಳಿಯದನ್ನಕ
ಕೂಡಲಸಂಗಯ್ಯನೆತ್ತ ? ನೀನೆತ್ತ ? ಮರುಳೇ!
೮೬.
ಹಾವು ತಿಂದವರ ನುಡಿಸ ಬಹುದು!
ಗರ ಹೊಡೆದವರ ನುಡಿಸ ಬಹುದು!
ಸಿರಿಗರ ಹೊಡೆದವರ ನುಡಿಸ ಬಾರದು ನೋಡಯ್ಯ!
ಬಡತನವೆಂಬ ಮಂತ್ರವಾದಿ ಹೋಗಲು
ಒಡನೆ ನುಡಿವರಯ್ಯ ಕೂಡಲಸಂಗಮದೇವ.
೮೭.
ಅರೆಭಕ್ತರಾದವರ ನೆರೆ ಬೇಡ, ಹೊರೆ ಬೇಡ.
ದಾರಿಸಂಗಡ ಬೇಡ, ದೂರ ನುಡಿಯಲು ಬೇಡ.
ಕೂಡಲಸಂಗನ ಶರಣರಲ್ಲಿ ಅಚ್ಚಲಿಂಗೈಕ್ಯಂಗೆ
ತೊತ್ತಾಗಿಹುದು ಕರಲೇಸಯ್ಯ.
೮೮.
ದೂಷಕನಾವನೊಬ್ಬ ದೇಶವ ಕೊಟ್ಟರೆ,
ಆಸೆಮಾಡಿ ಅವನ ಹೊರೆಯಲಿರಬೇಡ.
ಮಾದಾರ ಶಿವಭಕ್ತನಾದರೆ
ಆತನ ಹೊರೆಯಲು ಇಪ್ಪುದು ಕರಲೇಸಯ್ಯ!
ಭೃತ್ಯನಾಗಿ, ತೊತ್ತಾಗಿಪ್ಪುದು ಕರಲೇಸಯ್ಯ!
ಕಾಡುಸೊಪ್ಪ ತಂದು ಓಡಿನಲ್ಲಿ ಹುರಿದಿಟ್ಟುಕೊಂಡು
ಕೂಡಿಕೊಂಡಿಪ್ಪುದು ನಮ್ಮ ಕೂಡಲಸಂಗನ ಶರಣರ.
೮೯.
ಸಾರ ಸಜ್ಜನರ ಸಂಗವೇ ಲೇಸು ಕಂಡಯ್ಯ!
ದೂರ ದುರ್ಜನರ ಸಂಗವದು ಭಂಗವಯ್ಯ!
ಸಂಗವೆರಡುಂಟು-ಒಂದ ಬಿಡು, ಒಂದ ಹಿಡಿ
ಮಂಗಳಮೂರ್ತಿ ನಮ್ಮ ಕೂಡಲಸಂಗನ ಶರಣ.
೯೦.
ಪಟ್ಟವ ಕಟ್ಟಿದ ಬಳಿಕ ಲಕ್ಷಣವನರಸುವರೆ ?
ಲಿಂಗದೇವನ ಪೂಜಿಸಿ ಕುಲವನರಸುವರೆ,
ಅಯ್ಯಾ, ಕೂಡಲಸಂಗಮದೇವ
"ಭಕ್ತಕಾಯ ಮಮಕಾಯ" ವೆಂದನಾಗಿ ?
ಇಂತಿ
ಮಂಜುನಾಥ ಕೆ ಎಂ
ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು
ಬಸವಪಟ್ಟಣ {ಚಿರಡೋಣಿ}
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ