ಮಂಜುನಾಥ ಕೆ ಎಂ
ದೋಣಿ ಸಾಗಲಿ...
- ಕುವೆಂಪು
ದೋಣಿ ಸಾಗಲಿ ಮುಂದೆ ಹೋಗಲಿ ದೂರ ತೀರವ ಸೇರಲಿ ಬೀಸುಗಾಳಿಗೆ ಬೀಳು ತೇಲುವ ತೆರೆಯ ಮೇಗಡೆ ಹಾರಲಿ ||
ಹೊನ್ನಗಿಂಡಿಯ ಹಿಡಿದು ಕೈಯೊಳು ಹೇಮವಾರಿಯ ಚಿಮುಕಿಸಿ
ಮೇಘ ಮಾಲೆಗೆ ಬಣ್ಣವೀಯುತ ಯಕ್ಷಲೋಕವ ವಿರಚಿಸಿ
ನೋಡಿ ಮೂದನದಾ ದಿಗಂತದಿ ಮೂಡು ವೆಣ್ಣಿನ ಮೈಸಿರಿ
ರಂಜಿಸುತ್ತಿದೆ ಚೆಲುವೆಯಾಕೆಗೆ ಸುಪ್ರಭಾತವ ಬಯಸಿರಿ
ಕೆರೆಯ ಅಂಚಿನ ಮೇಲೆ ಮಿಂಚಿನ ಹನಿಗಳಂದದಿ ಹಿಮಮಣಿ
ಮಿನ್ಚುತೀಪು ಮೂಡು ತೈತಾರೆ ಬಾಲಕೋಮಲ ದಿನಮಣಿ
ಹಸಿರು ಜೋಳದ ಹೊಲದ ಗಾಳಿಯು ತೀಡಿ ತಣ್ಣಗೆ ಬರುತಿರೆ
ಹುದುಗಿ ಹಾಡುವ ಮತ್ತ ಕೋಕಿಲ ಮಧುರ ವಾಣಿಯ ತರುತಿರೆ
ದೂರ ಬೆಟ್ಟದ ಮೇಲೆ ತೇಲುವ ಬಿಳಿಯ ಮೋಡವ ನೋಡಿರಿ
ಅದನೆ ಹೋಲುತ ಅಂತೆ ತೇಲುತ ದೋಣಿಯಾಟವ ನಾಡಿರಿ
ನಾವು ಲೀಲಾಮಾತ್ರ ಜೀವರು ನಮ್ಮ ಜೀವನ ಲೀಲೆಗೆ
ನೆನ್ನೆ ನೆನ್ನೆಗೆ ಇಂದು ಇಂದಿಗೆ ಇರಲಿ ನಾಳೆಯು ನಾಳೆಗೆ

ಮಂಜುನಾಥ ಕೆ ಎಂ
ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು
ಬಸವಪಟ್ಟಣ {ಚಿರಡೋಣಿ}
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ